ಕಾಡಸಿದ್ಧೇಶ್ವರ |
194 ಇಂತಪ್ಪ ನಿರ್ಣಯವನು ಸ್ವಾನುಭಾವe್ಞನದಿಂ ತಿಳಿದು ಶಿವe್ಞನಿಗಳಾದ ಶಿವಶರಣರಿಗೆ, ಅಚ್ಚ ನಿಚ್ಚ ಸಮಯ ಏಕಪ್ರಸಾದಿಗಳೆಂದೆನ್ನಬಹುದು. ಭಕ್ತಾದಿ ಐಕ್ಯಾಂತಮಾದ ಷಟ್ಸ್ಥಲಬ್ರಹ್ಮ ಎಂದೆನ್ನಬಹುದು. ಅಂಗಸ್ಥಲ 44, ಲಿಂಗಸ್ಥಲ 57 ಇಂತೀ ಪಿಂಡಾದಿ e್ಞನಶೂನ್ಯಾಂತಮಾದ ನೂರೊಂದುಸ್ಥಲ ಮೊದಲಾದ ಸರ್ವಾಚಾರಸಂಪನ್ನನೆಂದೆನ್ನಬಹುದು. ಇಂತೀ ಭೇದವನರಿಯದೆ ತಮ್ಮ ತಾವಾರೆಂಬುದು ತಿಳಿಯದಿರ್ದಂಥ ಮತಿಭ್ರಷ್ಟ ಹೊಲೆಮಾದಿಗರಿಗೆ ಅದೆಲ್ಲಿಯದೊ ಗುರುಲಿಂಗಜಂಗಮದ ತೀಥಪ್ರಸಾದಸಂಬಂಧ ? ಅದೆಲ್ಲಿಯದೋ ಅಚ್ಚ ನಿಚ್ಚ ಸಮಯ ಏಕಪ್ರಸಾದದಸಂಬಂಧ ? ಇಂತಪ್ಪ ಗುರುಲಿಂಗಜಂಗಮದ ತೀರ್ಥಪ್ರಸಾದಕ್ಕೆ ಅಂದೇ ಹೊರಗಾಗಿ ಮತ್ತೆ ಮರಳಿ ಇಂದು ನಾವು ಗುರುಲಿಂಗಜಂಗಮದ ತೀರ್ಥಪ್ರಸಾದ ಪ್ರೇಮಿಗಳೆಂದು, ಆ ತ್ರಿಮೂರ್ತಿಗಳ ತಮ್ಮಂಗದಿಂ ಭಿನ್ನವಿಟ್ಟು, ತ್ರಿಕಾಲಂಗಳಲ್ಲಿ ಸ್ನಾನವ ಮಾಡಿ, ಜಪ, ತಪ, ಮಂತ್ರ, ಸ್ತೋತ್ರಗಳಿಂದ ಪಾಡಿ, ಪತ್ರಿ, ಪುಷ್ಪ ಮೊದಲಾದುದರಿಂ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಅರ್ಚಿಸಿ, ನಿತ್ಯನೇಮದಿಂ ಶೀಲ ವ್ರತಾಚಾರಂಗಳಿಂದ ಸಕಲ ಕ್ರಿಯಗಳನಾಚರಿಸಿ ಭಿನ್ನಫಲಪದವ ಪಡದು, ಕಡೆಯಲ್ಲಿ ಎಂ¨ತ್ತುನಾಲ್ಕುಲಕ್ಷ ಯೋನಿದ್ವಾರದಲ್ಲಿ ರಾಟಣದಂತೆ ತಿರುಗುವ ಭವಭಾರಿಗಳಾದ ಜೀವಾತ್ಮರಿಗೆ ಪ್ರಸಾದಿಗಳೆಂದಡೆ ಮೆಚ್ಚರಯ್ಯಾ ನಿಮ್ಮ ಶರಣರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗನಿರ್ಮಾಯಪ್ರಭುವೆ. |