ಉರಿಲಿಂಗಪೆದ್ದಿ
1427
ಪಂಕವಿಲ್ಲದ ಕಮಲಕ್ಕೆ ಸುಗಂಧ ಸುಲಲಿತವೆಂತಪ್ಪುದಯ್ಯಾ?
ಹೊನ್ನು ಹೆಣ್ಣು ಮಣ್ಣಿಲ್ಲದೆ ದೇವತಾಯೋಗ್ಯವೆಂತಪ್ಪುದಯ್ಯಾ?
ಕಮಲ ಪಂಕದಲಿ ವರ್ತಿಸಿದಂತೆ ವರ್ತಿಸುತಿಪ್ಪರು ನಿಮ್ಮ ಶರಣರು,ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
ಮುದ್ರಿಸು
ನಿರ್ಗಮನ